Wednesday, August 17, 2022

Latest Posts

ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲ್ಲುವಷ್ಟು ಶಕ್ತಿ ಸಂಪಾದಿಸಿದೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್

ಹೊಸದಿಗಂತ ವರದಿ, ಮಂಡ್ಯ:

ಹಳೇ ಮೈಸೂರು ಭಾಗದಲ್ಲಿ ದುರ್ಬಲವಾಗಿದ್ದ ಬಿಜೆಪಿ ಅಭ್ಯರ್ಥಿಗಳು ಈಗ ಜೆಡಿಎಸ್-ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿ ಗೆಲ್ಲುವಷ್ಟು ಶಕ್ತಿ ಸಂಪಾದಿಸಿದ್ದಾರೆ. ಅದಕ್ಕೆ ಕೆ.ಆರ್.ಪೇಟೆ ಚುನಾವಣೆಯೇ ಸಾಕ್ಷಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

ನಗರದ ಎ.ಸಿ.ಮಾದೇಗೌಡ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಹಳೇ ಮೈಸೂರು ಭಾಗದಲ್ಲಷ್ಟೇ ಅಲ್ಲದೆ, ರಾಜ್ಯದ ಹಲವಾರು ಕಡೆಗಳಲ್ಲಿ ಬಿಜೆಪಿ ಗೆದ್ದು ತೋರಿಸಿದೆ.

30 ವರ್ಷಗಳ ಹಿಂದೆ ಕೇವಲ 2 ಸೀಟುಗಳಿಗೆ ಸೀಮಿತವಾಗಿದ್ದ ಬಿಜೆಪಿ ಇಂದು 306 ಸ್ಥಾನಗಳಲ್ಲಿ ಗೆದ್ದು ಸ್ವತಂತ್ರವಾಗಿ ಅಧಿಕಾರ ಹಿಡಿಯುವ ಸಾಮರ್ಥ್ಯ ಸಂಪಾದಿಸಿದೆ ಎಂದು ಹೇಳಿದರು.

ಬಿಜೆಪಿಯನ್ನು ಗೇಲಿ ಮಾಡುತ್ತಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್‌ನೊಳಗೆ ಪಕ್ಷದ ಬೆಳವಣಿಗೆ ನಡುಕ ಹುಟ್ಟುವಂತೆ ಮಾಡಿದೆ. ಬಿಜೆಪಿ ಕಾರ್ಯರ್ತರು ವ್ಯಂಗ್ಯಕ್ಕೆ, ಅವಮಾನಕ್ಕೆ ತುತ್ತಾಗಿರುವಂತಹವರು. ಅಂತಹ ಲಕ್ಷಾಂತರ ಜನ ಕಾರ್ಯ಻ಕರ್ತರು ಕಮಲವನ್ನು ಅರಳಿಸಲು ಕಾರಣರಾಗಿದ್ದಾರೆ ಎಂದು ಬಣ್ಣಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!