ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಹೈಕಮಾಂಡ್ ನಾಯಕರ ಜತೆ ಮಹತ್ವದ ಸಭೆ ನಡೆಸಿದ್ದಾರೆ.
ಮೈತ್ರಿ ಪಕ್ಷಗಳಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆ ನಡೆದಿದ್ದು, ಸದ್ಯಕ್ಕೆ ಮೂರು ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.
ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯು ಪ್ರಸ್ತುತ ಮೂರು ಕ್ಷೇತ್ರಗಳಿಂದ ಹಿಂದೆ ಸರಿಯಲು ಯೋಜಿಸುತ್ತಿದೆ ಆದರೆ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳ ಉಳಿದ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯ ಮೂಲಕ ಗುರುತಿಸಲಾಗುವುದು ಎಂದು ಹೇಳಿದರು.