ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯೊಳಗಿನ ಬಣ ಕಿತ್ತಾಟಕ್ಕೆ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಹೈಕಮಾಂಡ್ ನೋಟಿಸ್ ನೀಡಿದೆ.
ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಯತ್ನಾಳ್‌ಗೆ ನೋಟಿಸ್ ಹೊರಡಿಸಲಾಗಿದೆ. ಯತ್ನಾಳ್ ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಹೈಕಮಾಂಡ್ ಕೇಳಿದೆ. ಕೊನೆಗೂ ಭಿನ್ನಮತಕ್ಕೆ ತೆರೆ ಎಳೆಯಲು ಹೈಕಮಾಂಡ್ ಮಧ್ಯಪ್ರವೇಶ ಮಾಡಿದೆ.
ವಕ್ಫ್ ವಿರುದ್ಧ ಹೋರಾಟ ನಡೆಸುತ್ತಿರುವ ಯತ್ನಾಳ್ ಬಣ ವಿಜಯೇಂದ್ರ ಪದಚ್ಯುತಿಗೆ ಒತ್ತಾಯಿಸಿದೆ. ಇತ್ತ ವಿಜಯೇಂದ್ರ ಬೆಂಬಲಕ್ಕೆ ನಿಂತಿರುವ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ ಬಣ, ಯತ್ನಾಳ್ ವಿರುದ್ಧ ಗುಡುಗಿದೆ. ಪಕ್ಷದಿಂದ ಉಚ್ಚಾಟನೆಗೆ ಪಟ್ಟು ಹಿಡಿದಿದ್ದಾರೆ.