ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಡಿದೆ.
ಬಿಜೆಪಿ ಹೈಕಮಾಂಡ್ ಸೂಚನೆಯಿಂದ ಬಿಜೆಪಿ ಶಿಸ್ತು ಸಮಿತಿಯು ಯತ್ನಾಳ್‌ಗೆ ನೋಟಿಸ್ ನೀಡಿದೆ. ಬಿವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ವಿವರಣೆ ಕೇಳಲಾಗಿದೆ.
ಖುದ್ದು ಹಾಜರಾಗಿ, ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ಸೂಚನೆ ನೀಡಲಾಗಿದೆ. ನೋಟಿಸ್ ನೀಡಿದ 72 ಗಂಟೆಗಳ ಒಳಗೆ ಉತ್ತರ ಕೊಡಬೇಕು ಅಂತ ಯತ್ನಾಳ್‌ಗೆ ಸೂಚನೆ ನೀಡಲಾಗಿದೆ.