ರಾಹುಲ್ ಗಾಂಧಿಯ ಷೇರು ಮಾರ್ಕೆಟ್ ಆರೋಪಕ್ಕೆ ಬಿಜೆಪಿ ತಿರುಗೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ‘ಷೇರು ಮಾರ್ಕೆಟ್ ಹಗರಣ’ ಆರೋಪದ ಬಗ್ಗೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.

ಲೋಕಸಭೆ ಚುನಾವಣೆಯ ಸೋಲನ್ನು ರಾಹುಲ್ ಗಾಂಧಿಗೆ ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೀಗ ಮಾರುಕಟ್ಟೆ ಹೂಡಿಕೆದಾರರನ್ನು ದಾರಿ ತಪ್ಪಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ. ಇಂದು ಭಾರತವು ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಬಿಜೆಪಿ ನಾಯಕ ಪಿಯೂಷ್ ಗೋಯಲ್ ತಿರುಗೇಟು ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಷೇರು ಮಾರುಕಟ್ಟೆ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ಮೊದಲ ಬಾರಿಗೆ ನಮ್ಮ ಮಾರುಕಟ್ಟೆ ಕ್ಯಾಪ್ 5 ಟ್ರಿಲಿಯನ್ ಡಾಲರ್‌ಗಳನ್ನು ದಾಟಿದೆ. ಇಂದು ಭಾರತದ ಇಕ್ವಿಟಿ ಮಾರುಕಟ್ಟೆಯು ವಿಶ್ವದ ಟಾಪ್ 5 ಆರ್ಥಿಕತೆಗಳ ಮಾರುಕಟ್ಟೆ ಕ್ಯಾಪ್ ಅನ್ನು ಪ್ರವೇಶಿಸಿದೆ. ಮೋದಿ ಸರ್ಕಾರದ ಅಡಿಯಲ್ಲಿ ಮಾರುಕಟ್ಟೆಯಲ್ಲಿ ಪಟ್ಟಿ ಮಾಡಲಾದ PSU ಗಳ ಮಾರುಕಟ್ಟೆ ಕ್ಯಾಪ್ 4 ಪಟ್ಟು ಹೆಚ್ಚಾಗಿದೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.

ಸ್ಟಾಕ್ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ 5 ಕೋಟಿ ಕುಟುಂಬಗಳಿಗೆ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ನಿರ್ದಿಷ್ಟ ಹೂಡಿಕೆ ಸಲಹೆಯನ್ನು ಏಕೆ ನೀಡಿದರು? ಹೂಡಿಕೆ ಸಲಹೆ ನೀಡುವುದು ಅವರ ಕೆಲಸವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರು.ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಗೋಯಲ್, ‘10 ವರ್ಷಗಳ ಹಿಂದೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಭಾರತದ ಮಾರುಕಟ್ಟೆ ಮೌಲ್ಯ 67 ಲಕ್ಷ ಕೋಟಿ ರೂ. ಇತ್ತು. ಇಂದು ಮಾರುಕಟ್ಟೆ ಮೌಲ್ಯ 415 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ’ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!