ನಮ್ಮ ಭೂಮಿ, ನಮ್ಮ ಹಕ್ಕು’ ವಕ್ಫ್‌ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ

ಹೊಸದಿಗಂತ ವರದಿ ವಿಜಯಪುರ

ನಮ್ಮ ಭೂಮಿ- ನಮ್ಮ ಹಕ್ಕು ಎಂದು ವಕ್ಫ್ ಕಾಯ್ದೆ ವಿರೋಧಿಸಿ ನಗರದಲ್ಲಿ ಶುಕ್ರವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಧರಣಿ ಸತ್ಯಾಗ್ರಹ ಹಮ್ಮಿಕೊಂಡರು.

ಪ್ರತಿಭಟನಾಕಾರರು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಆರಂಭಿಸಿ, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳೆ ಇಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧಿಕ್ಕಾರ, ಮಠ, ಮಂದಿರ, ಅನ್ನದಾತರ ಜಾಗಕ್ಕೂ ಬೇಲಿ ಹಾಕಿದ ವಕ್ಫ್ ಗೆ ಧಿಕ್ಕಾರ ಎನ್ನುವ ಬಿತ್ತಿ ಫಲಕಗಳನ್ನು ಪ್ರದರ್ಶಿಸುತ್ತ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿ, ಡಿಸಿ ಕಚೇರಿ ಎದುರಿನ ರಸ್ತೆಯಲ್ಲಿ ಧರಣಿ ಹಮ್ಮಿಕೊಂಡರು.

ಈ ಸಂದರ್ಭ ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮುಖಂಡರಾದ ವಿಜುಗೌಡ ಪಾಟೀಲ, ಚಂದ್ರಶೇಖರ ಕವಟಗಿ, ರಮೇಶ ಭಸನೂರ, ಅರುಣ ಶಹಾಪುರ, ಸೋಮನಗೌಡ ಪಾಟೀಲ ಸಾಸನೂರ, ಸುರೇಶ ಬಿರಾದಾರ, ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಶಿವರುದ್ರ ಬಾಗಲಕೋಟ ಇತರರು ಇದ್ದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!