ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮೂಲಗಳ ಪ್ರಕಾರ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ಸಭೆ ಫೆಬ್ರವರಿ 19 ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ, ಫೆಬ್ರವರಿ 20 ರಂದು ರಾಮಲೀಲಾ ಮೈದಾನದಲ್ಲಿ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
“ಇಂದು ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ. ಈಗ ಈ ಸಭೆ ಫೆಬ್ರವರಿ 19 ರಂದು ನಡೆಯಲಿದೆ. ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭವು ಫೆಬ್ರವರಿ 18 ರ ಬದಲಿಗೆ ಫೆಬ್ರವರಿ 20 ರಂದು ನಡೆಯಲಿದೆ” ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕಾರ್ಯಕ್ರಮದ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ತಾವ್ಡೆ ಮತ್ತು ತರುಣ್ ಚುಗ್ ಅವರನ್ನು ಉಸ್ತುವಾರಿಗಳಾಗಿ ನೇಮಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿಗಳು, ಎನ್‌ಡಿಎ ನಾಯಕರು, ಕೇಂದ್ರ ಸಚಿವರು, ಕಾರ್ಪೊರೇಟ್ ಜಗತ್ತಿನ ಕೈಗಾರಿಕೋದ್ಯಮಿಗಳು, ಚಲನಚಿತ್ರ ತಾರೆಯರು, ಕ್ರಿಕೆಟ್ ಆಟಗಾರರು, ಸಂತರು ಮತ್ತು ಋಷಿಮುನಿಗಳು ಸಹ ಉಪಸ್ಥಿತರಿದ್ದು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.