ನಾಳೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ: ಸಿ.ಟಿ. ರವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಹಲವು ಕಾರಣಗಳಿಂದ ಮುಂದೂಡಿಕೆಯಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಾಳೆ ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ.
ಅರಮನೆ ಮೈದಾನದ ತ್ರಿಪುರ ವಾಸಿನಿ, ಗೇಟ್ ನಂ. 2 ರಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಸಿದ್ಧತೆಯನ್ನು ಬಿಜೆಪಿ ನಾಯಕರು ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಅ. 7 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಪ್ರಭಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ, ಪಕ್ಷದ ಎಲ್ಲ ಕೋರ್ ಕಮಿಟಿ ಸದಸ್ಯರು, ಸಹ ಪ್ರಭಾರಿ ಡಿ.ಕೆ. ಅರುಣಾ ಸೇರಿದಂತೆ 592 ಜನ ರಾಜ್ಯ ಕಾರ್ಯಕಾರಿಣಿಯ ಅಪೇಕ್ಷಿತ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.

ಹಾಲಿ ಸಂಸದರು, ಹಾಲಿ ಶಾಸಕರು, ರಾಜ್ಯ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ರಾಜ್ಯ ಅಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠಗಳ ಸಂಚಾಲಕರು, ಜಿಲ್ಲೆ, ವಿಭಾಗಗಳ ಪ್ರಭಾರಿಗಳು, ಜಿಲ್ಲಾ ಬಿಜೆಪಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಈ ರಾಜ್ಯ ಕಾರ್ಯಕಾರಿಣಿಯ ಅಪೇಕ್ಷಿತ ಸದಸ್ಯರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!