ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಕಾಲ ರಾಜ್ಯ ಪ್ರವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಜನ ಸಂಕಲ್ಪ ಯಾತ್ರೆಗಾಗಿ ಇಂದು ರಾತ್ರಿ 8.10ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ನಗರದ ಕುಮಾರಕೃಪಾ ಗೆಸ್ಟ್ ಹೌಸ್​​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. 15ರಂದು ಅವರು ಹಾವೇರಿ, ಹಿರೇಕೆರೂರುಗಳಲ್ಲಿ ವಿವಿಧ ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ರಾತ್ರಿ ಅವರು ಹುಬ್ಬಳ್ಳಿಯಲ್ಲಿ ವಾಸ್ತವ್ಯ ಇರುವರು.
16ರಂದು ಅವರು ಹುಬ್ಬಳ್ಳಿ- ಧಾರವಾಡಗಳಿಗೆ ಸಂಬಂಧಿಸಿದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೆಳಗಾವಿಗೆ ತೆರಳಿ ಅಲ್ಲಿ ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ಬೆಳಗಾವಿ ಕೆಎಲ್​ಇ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. 17ರಂದು ಚಿಕ್ಕೋಡಿಯಲ್ಲಿ ಪೂರ್ವ ನಿಗದಿತ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ ಬೆಳಗಾವಿ ವಿಮಾನ ನಿಲ್ದಾಣದಿಂದ ದೆಹಲಿಗೆ ಹಿಂತಿರುಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!