ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ, ಜಾರ್ಖಂಡ್ ಎರಡೂ ರಾಜ್ಯಗಳ ಮತದಾನ ಮುಗಿದಿದೆ. ರಾಜ್ಯದ ಉಪಚುನಾವಣೆಗಳ ಫಲಿತಾಂಶವೂ ಇದೆ. ಎಕ್ಸಿಟ್ ಪೋಲ್ ಕೂಡ ನೋಡಿದ್ದೇವೆ. ಮಹಾರಾಷ್ಟ್ರದಲ್ಲಿ ಎನ್‌ಡಿಎ, ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಮಗೂ ಸಹ ಇದೇ ಮಾಹಿತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಎನ್‌ಡಿಎ ಬಹುಮತ ಬಂದರೂ ಚುನಾವಣೆಯಲ್ಲಿ ನಾವು ಗೆದ್ದೇವೋ, ಕಾಂಗ್ರೆಸ್ ಗೆಲ್ಲುತ್ತೋ ಎನ್ನುವ ಆರ್ಭಟ ಇತ್ತು. ಫಲಿತಾಂಶದ ನಂತರ ಕಾಂಗ್ರೆಸ್ ಸಂಪೂರ್ಣ ನೆಲ ಕಚ್ಚುತ್ತದೆ. ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.