ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ರಾಜ್ಯಗಳ ಚುನಾವಣಾ ಮತಎಣಿಕೆ ಆರಂಭವಾಗಿದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಹಿಂದೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆದರೆ ಅಲ್ಲಿನ ಜನ ಬಿಜೆಪಿಗೆ ಆದ್ಯತೆ ನೀಡಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈಗಿನವರೆಗಿನ ಫಲಿತಾಂಶ ನೋಡಿದರೂ ಸಾಕು, ಬಿಜೆಪಿ ಗೆಲ್ಲುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ ಎಂದು ಹೇಳಿದ್ದಾರೆ.