ಚುನಾವಣಾ ಅಖಾಡದಲ್ಲಿ ಬಿಜೆಪಿ: ಸ್ಟಾರ್ ಪ್ರಚಾರಕರ ಪಟ್ಟಿ ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪಂಚ ರಾಜ್ಯಗಳ ಚುನಾವಣೆಗೆ ಬಿಜೆಪಿ ಬರ್ಜರಿಮ್ ತಯಾರಿ ನಡೆಸುತ್ತಿದ್ದು, ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ.

ಇದೀಗ ಬಿಜೆಪಿ ಛತ್ತೀಸಘಡ ಚುನಾವಣೆಗೆ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದೆ. 40 ನಾಯಕರ ಪೈಕಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಮುಖರಾಗಿದ್ದಾರೆ.

ಛತ್ತೀಸಘಡದಲ್ಲಿ ಎರಡು ಹಂತದಲ್ಲಿ ಚುನಾವಣೆಯಲ್ಲಿ ನಡೆಯಲಿದೆ. ನವೆಂಬರ್ 7 ಹಾಗೂ ನವೆಂಬರ್ 17 ರಂದು ಚತ್ತೀಸಘಡ ಚುನಾವಣೆ ನಡೆಯಲಿದೆ.

ಚುನಾವಣೆಯಲ್ಲಿ ಪ್ರಚಾರದಲ್ಲಿಕರ್ನಾಟಕದ ಯಾವೊಬ್ಬ ನಾಯಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಸ್ಮತಿ ಇರಾನಿ, ಮನ್ಸೂಕ್ ಮಾಂಡವಿಯಾ, ಅನುರಾಗ್ ಠಾಕೂರ್, ಜ್ಯೋತಿರಾಧಿತ್ಯ ಸಿಂಧಿಯಾ, ನಿತಿನ್ ಗಡ್ಕರಿ, ಒಂಪ್ರಕಾಶ್ ಮಾಥೂರ್, ಶಿವರಾಜ್ ಸಿಂಗ್ ಚೌಹ್ವಾಣ್, ಅರ್ಜುನ್ ಮುಂಡಾ ಸೇರಿದಂತೆ ಪ್ರಮುಖರು ಛತ್ತೀಸಘಡದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

90 ಸ್ಥಾನಬಲ ಹೊಂದಿರುವ ಛತ್ತೀಸ್‌ಗಢ ವಿಧಾನಸಭೆಗೆ ನ.7ರಂದು ಮೊದಲ ಹಂತದಲ್ಲಿ ಮತ್ತು ನ.17ರಂದು ಎರಡನೇ ಹಂತದಲ್ಲಿ 70 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದರೆ, ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಭಾರತ ರಾಷ್ಟ್ರೀಯ ಸಮಿತಿ ಮತ್ತು ಮಿಜೋರಂನಲ್ಲಿ ಎನ್‌ಡಿಎ ಮಿತ್ರಪಕ್ಷವಾದ ಮಿಜೋ ನ್ಯಾಷನಲ್‌ ಫ್ರಂಟ್‌ ಅಧಿಕಾರದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!