ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಬಂಧಿಸಲು ಬಿಜೆಪಿ ಒತ್ತಾಯ

ಹೊಸದಿಗಂತ , ಮಂಡ್ಯ :

ರಾಜ್ಯದ ಶಕ್ತಿ ಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮಂಡ್ಯ ನಗರದ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ವಿಕಾಸ ಭವನದ ಬಳಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಇತರರ ವಿರುದ್ಧ ಘೋಷಣೆ ಕೂಗುತ್ತಾ ವಿನೋಬ ರಸ್ತೆ, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಬಂದೀಗೌಡ ಬಡಾವಣೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು.

ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಕಾಂಗ್ರೆಸ್ ಕಚೇರಿ ಬಳಿ ಪೊಲೀಸರು ಬ್ಯಾರಿಕೇಟ್ ಅಳವಡಿಸಿ ಪ್ರತಿಭಟನಾಕಾರರನ್ನು ತಡೆದರು. ಪ್ರತಿಭಟನೆಯನ್ನು ಹತ್ತಿಕ್ಕಲು ರಾಜ್ಯಸರ್ಕಾರ ಪೊಲೀಸರ ಮೂಲಕ ತಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಬ್ಯಾರಿ ಕೇಡ್ ಮೇಲೆರಿದ ಕೆಲವು ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು, ಬ್ಯಾರಿ ಕೆಡ್ ತಡೆ ಭೇದಿಸಲು ಪ್ರಯತ್ನ ಮಾಡಿದಾರಾದರೂ ಇದಕ್ಕೆ ಪೊಲೀಸರು ಅವಕಾಶ ಮಾಡಿಕೊಡದೆ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ‌್ಯಕರ್ತರಾದ ಕೆ.ಎಸ್. ನಂಜುಂಡೇಗೌಡ, ಎಚ್.ಆರ್. ಅರವಿಂದ್, ಸಿ.ಟಿ. ಮಂಜುನಾಥ್, ವಸಂತ್, ಭೀಮೇಶ್, ಅಶೋಕ್‌ಕುಮಾರ್, ಕೇಶವ, ನಾಗಮಂಗಲ ನರಸಿಂಹ, ಹೊಸಹಳ್ಳಿ ಶಿವು, ನಿತ್ಯಾನಂದ, ಶಂಕರ್, ಧರಣಿ, ನರಸಿಂಹಚಾರ್, ಶಶಿಕುಮಾರ್, ಹೊಸಳ್ಳಿ ಶಿವು, ಅಶೋಕ್ ಜಯರಾಂ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದೊಯ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!