Monday, December 11, 2023

Latest Posts

ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸುವ ಪಕ್ಷ ಬಿಜೆಪಿ: ಜೆ.ಪಿ ನಡ್ಡಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೇಶದಲ್ಲಿ ಕುಟುಂಬ ಆಧರಿತ ಪಕ್ಷಗಳ ನಡುವೆ ರಾಷ್ಟ್ರೀಯ ಪಕ್ಷವಾಗಿ ಹೋರಾಡುತ್ತಿರುವ ಏಕೈಕ ಪಕ್ಷ ಬಿಜೆಪಿ.ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಪ್ರತಿ ರಾಜ್ಯದಲ್ಲೂ ಶ್ರಮಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದರು.

ಇಂದುಹೈದರಾಬಾದ್‌ ಹೊರವಲಯದಲ್ಲಿ ಬಿಜೆಪಿಯ ತೆಲಂಗಾಣ ಘಟಕದ ರಾಜ್ಯ ಕೌನ್ಸಿಲ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಬ್ಬ ಮತದಾರನ ಬಳಿ ತೆರಳಿ ಮೋದಿ ಸರ್ಕಾರದ ಸಾಧನೆಗಳನ್ನು ತಲುಪಿಸುವಂತೆ ಪಕ್ಷದ ಮುಖಂಡರಿಗೆ ಸೂಚನೆ ನೀಡಿದರು.

ಪ್ರಾದೇಶಿಕ ಪಕ್ಷಗಳು ಕುಟುಂಬ ಪಕ್ಷಗಳಾಗಿ ಪರಿವರ್ತನೆಗೊಂಡಿವೆ. ಆದರೆ ಸದ್ಯ ರಾಷ್ಟ್ರೀಯ ಪಕ್ಷವಾಗಿ ಹೋರಾಡುತ್ತಿರುವ ಏಕೈಕ ರಾಜಕೀಯ ಪಕ್ಷವೆಂದರೆ ಅದು ಭಾರತೀಯ ಜನತಾ ಪಕ್ಷ. ಮುಂದಿನ ದಿನಗಳಲ್ಲಿ ಪ್ರತಿ ರಾಜ್ಯದಲ್ಲೂ ಬಿಜೆಪಿಯ ಸಿದ್ದಾಂತವನ್ನು ಜನರು ಒಪ್ಪಿ ನಮಗೆ ಮತ ಹಾಕಲಿದ್ದಾರೆ. ಅದರಲ್ಲಿ ಯಾವುದೇ ಸಂಶಯ ಬೇಡ’ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!