ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತೊಂದು ಬಲ: ಅಮಿತ್​ ಶಾರನ್ನು ಭೇಟಿಯಾದ ರಾಜ್​ ಠಾಕ್ರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆ(Lok Sabha Election) ಗೆ ರಾಜಕೀಯ ಪಕ್ಷಗಳು ಭರ್ಜರಿ ರಣತಂತ್ರ ರೂಪಿಸುತ್ತಿದ್ದು, ಈ ನಡುವೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್​ ಠಾಕ್ರೆ ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾಗಿದ್ದಾರೆ.

ಇದೀಗ ರಾಜ್ ಠಾಕ್ರೆ ಅವರ ಪಕ್ಷ ಎಂಎನ್‌ಎಸ್ ಎನ್‌ಡಿಎ ಸೇರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ನಾಯಕ ರಾಜ್ ಠಾಕ್ರೆ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿಯಾದರು.

ಅಮಿತ್ ಶಾ ಅವರೊಂದಿಗಿನ ರಾಜ್ ಠಾಕ್ರೆ ಅವರ ಈ ಸಭೆಯು ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯನ್ನು ಬಲಪಡಿಸಲು ಮುನ್ಸೂಚನೆ ಆಗಿದೆ. ಹೀಗಾಗಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಎನ್‌ಡಿಎ ಮೈತ್ರಿಕೂಟದ ಭಾಗವಾಗುವುದು ಬಹುತೇಕ ಖಚಿತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!