ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ವರ್ಷ ನಡೆಯಲಿರುವಲೋಕಸಭೆಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮಂಗಳವಾರ ದಿಬ್ರುಗಢದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈಶಾನ್ಯದಲ್ಲಿ 14 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಒಂದು ಕಾಲವಿತ್ತು ಈಶಾನ್ಯ ಪ್ರದೇಶವನ್ನು ಕಾಂಗ್ರೆಸ್ನ ಕೋಟೆ ಎಂದು ಪರಿಗಣಿಸಲಾಗಿತ್ತು. ಆದರೆ, ರಾಹುಲ್ ಗಾಂಧಿಯವರ ಯಾತ್ರೆ (ಭಾರತ್ ಜೋಡೋ ಯಾತ್ರೆ) ಹೊರತಾಗಿಯೂ,ಇಲ್ಲಿ ಇತ್ತೀಚೆಗೆ ನಡೆದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿಕಾಂಗ್ರೆಸ್ಪಕ್ಷವು ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದೆ ಎಂದರು.
ಇದೇ ವೇಳೆರಾಹುಲ್ ಗಾಂಧಿಯವರ ವಿವಾದಾತ್ಮಕ ಹೇಳಿಕೆಗಳನ್ನು ಪ್ರಸ್ತಾಪಿಸಿದ ಶಾ, ‘ಅವರು (ರಾಹುಲ್ ಗಾಂಧಿ) ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಇದೇ ರೀತಿ ಮುಂದುವರಿದರೆ, ಈಶಾನ್ಯ ಮಾತ್ರವಲ್ಲ ಇಡೀ ದೇಶದಲ್ಲೇ ಕಾಂಗ್ರೆಸ್ ವೈಟ್ ವಾಶ್ ಆಗಲಿದೆ ಎಂದು ಹೇಳಿದರು.