ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ವಿರುದ್ಧ ಜನರಲ್ಲಿ ಹೆಚ್ಚುತ್ತಿರುವ ಅಸಮಾಧಾನವೇ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಆದರೆ ಚುನಾವಣೆಗಳು ಸಂಪೂರ್ಣವಾಗಿ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಬೇಕೆಂಬುದೇ ಪ್ರಮುಖ ಸವಾಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಒಗ್ಗಟ್ಟಿನಿಂದ ಬಿಜೆಪಿಗೆ ಸವಾಲು
ವಿರೋಧ ಪಕ್ಷಗಳು ಒಂದಾಗಿ ನಿಂತರೆ ಬಿಜೆಪಿಯನ್ನು ಸೋಲಿಸುವುದು ಕಷ್ಟದ ಕೆಲಸವಲ್ಲ ಎಂದು ರಾಹುಲ್ ಹೇಳಿದರು. ಮೈತ್ರಿ ಪಕ್ಷಗಳಿಂದ ಬರುವ ಟೀಕೆಗಳನ್ನು ಕಾಂಗ್ರೆಸ್ ಸಹಜವಾಗಿ ಸ್ವೀಕರಿಸುತ್ತಿದ್ದು, ಎಲ್ಲರನ್ನು ಒಗ್ಗೂಡಿಸುವ ಜವಾಬ್ದಾರಿಯನ್ನು ಪಕ್ಷ ನಿರ್ವಹಿಸುತ್ತಿದೆ ಎಂದರು.
ಇದನ್ನೂ ಓದಿ:
ಇಂಡಿಯಾ ಒಕ್ಕೂಟದಲ್ಲಿ ಬಿರುಕು ಇಲ್ಲ
ಇಂಡಿಯಾ ಮೈತ್ರಿಕೂಟದಲ್ಲಿ ಸಮನ್ವಯ ಕೊರತೆ ಇದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿದ ರಾಹುಲ್, ರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಮಿತ್ರಪಕ್ಷಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಸ್ಪಷ್ಟಪಡಿಸಿದರು. ಡಿಎಂಕೆ ಸೇರಿದಂತೆ ಎಲ್ಲ ಪಕ್ಷಗಳು ಒಕ್ಕೂಟದ ಬಲವನ್ನು ಉಳಿಸಿಕೊಳ್ಳಲು ಬದ್ಧವಾಗಿವೆ ಎಂದರು.
ಸ್ಥಳೀಯ ರಾಜಕೀಯ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ಕೆಲವು ರಾಜ್ಯಗಳಲ್ಲಿ ಪರಸ್ಪರ ಟೀಕೆಗಳಿದ್ದರೂ ರಾಷ್ಟ್ರೀಯ ಮಟ್ಟದಲ್ಲಿ ಸಹಕಾರ ಮುಂದುವರಿಯುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು. ರಾಜಕೀಯ ಸ್ಪರ್ಧೆ ಮತ್ತು ಮೈತ್ರಿ ಸಂಬಂಧಗಳನ್ನು ಪ್ರತ್ಯೇಕವಾಗಿ ನೋಡಬೇಕೆಂದು ಅವರು ಅಭಿಪ್ರಾಯಪಟ್ಟರು.



