ಗುಜರಾತ್, ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ: ಎರಡೂ ರಾಜ್ಯದಲ್ಲಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ ಬಿಜೆಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಎರಡೂ ರಾಜ್ಯದಲ್ಲಿ ಈಗಾಗಲೇ ಮತಎಣಿಕೆ ಆರಂಭವಾಗಿದೆ. ಗುಜರಾತ್ ಮತ್ತು ಹಿಮಾಚಲಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಮತ್ತೊಮ್ಮೆ ಎರಡೂ ರಾಜ್ಯದಲ್ಲಿ ಗೆಲುವು ಸಾಧಿಸಿ ದಾಖಲೆ ನಿರ್ಮಿಸುವ ಗುರಿ ಹೊಂದಿದೆ.

ಪಶ್ಚಿಮ ಬಂಗಾಳದಲ್ಲಿ ಸಿಪಿಎಂ ಪಕ್ಷ ಸತತವಾಗಿ ಏಳು ಬಾರಿ ಗೆಲುವು ಸಾಧಿಸಿತ್ತು. 1977 ರಿಂದ 2011 ರವರೆಗೆ 34 ವರ್ಷ ಅಧಿಕಾರ ನಡೆಸಿತ್ತು. ಇದೀಗ ಬಿಜೆಪಿ 2022ರ ಚುನಾವಣೆಯನ್ನು ಗೆದ್ದರೆ ಈ ದಾಖಲೆ ಮುರಿಯುತ್ತದೆ. ಸಮೀಕ್ಷೆಗಳ ಪ್ರಕಾರ ಈ ಬಾರಿ ಬಿಜೆಪಿ ಗೆದ್ದು ಎಲ್ಲ ದಾಖಲೆ ಮುರಿಯಲಿದೆ ಎನ್ನಲಾಗಿದೆ.

ಹಿಮಾಚಲ ಪ್ರದೇಶದಲ್ಲಿ 1985 ರ ನಂತರ ಯಾವ ಪಕ್ಷವೂ ಸತತವಾಗಿ ಎರಡು ಬಾರಿ ಅಧಿಕಾರಕ್ಕೆ ಬಂದಿಲ್ಲ, ಆದರೆ ಈ ಬಾರಿ ಬಿಜೆಪಿ ಗೆದ್ದರೆ ಈ ದಾಖಲೆ ಕೂಡ ಮುರಿಯುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!