ಹೊಸದಿಗಂತ ವರದಿ ಹುಬ್ಬಳ್ಳಿ:
ಬೆಳಗಾವಿಯಲ್ಲಿ ನಡೆಸುತ್ತಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಕ್ಕೆ ಇಡಿ ಮೂಲಕ ಬಿಜೆಪಿ ಕಾಂಗ್ರೆಸ್ ನಾಯಕರ ಹೆದರಿಸುತ್ತಿದೆ ಎಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ೩೦೦ ಕೋಟಿ ಆಸ್ತಿ ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ(ಇಡಿ) ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು.
ಬಿಜೆಪಿ ದ್ವೇಷ ಹಾಗು ಹಿಂಸೆಯ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನ ಪ್ರಭಾವಿ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ್ ಗಾಂಧಿ ಅವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಈಗ ಸಿದ್ದರಾಮಯ್ಯ ವಿರುದ್ಧ ಇಡಿ ಅಸ್ತ್ರ ಪ್ರಯೋಗಿಸಿದೆ ಎಂದು ಆರೋಪಿಸಿದರು.
ಅಮಿತ್ ಶಾ ಅಂಬೇಡ್ಕರ್ ಗೆ ಅವಮಾನ ಮಾಡಿದನ್ನು ಮರೆಮಾಚಲು ಈ ರೀತಿ ಆರೋಪ ಮಾಡಲು ಮುಂದಾಗಿದ್ದಾರೆ. ಗೋಡ್ಸೆ ವಿಚಾರದಾರೆ ಹೊಂದಿರುವ ಬಿಜೆಪಿ ಅವರು, ಗಾಂಧಿ ತತ್ವ ಒಪ್ಪಲು ಸಾಧ್ಯವಿಲ್ಲ. ಬಿಜೆಪಿ ಯಾವತ್ತಿಗೂ ಸಂವಿಧಾನ ವಿರೋಧಿಸುತ್ತ ಬಂದಿದೆ. ಬಿಜೆಪಿ ಸಾಮಾಜಿಕ ನ್ಯಾಯದ ವಿರುದ್ಧ ಕೆಲಸ ಮಾಡುತ್ತದೆ ಎಂದು ಹರಿಹಾಯ್ದರು.
ದೆಹಲಿಯಲ್ಲಿ ಕಾಂಗ್ರೆಸ್ ತನ್ನ ಸ್ವಂತ ಶಕ್ತಿಯ ಮೇಲೆ ಚುನಾವಣೆ ಸ್ಪರ್ಧಿಸಲಿದೆ. ಆಮ್ ಆದ್ಮಿ ದೆಹಲಿಯಲ್ಲಿ ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಆ ಕಾರಣಕ್ಕೆ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸಿದೆ ಎಂದು ಹೇಳಿದರು.