ನಮ್ಮ ಶಾಸಕರಿಗೆ ಬಿಜೆಪಿ ಅವ್ರು ಆಫರ್ ಮಾಡ್ತಾ ಇದಾರೆ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಮ್ಮ ಶಾಸಕರಿಗೆ ಬಿಜೆಪಿ ಅವರು ಆಫರ್ ಕೊಡ್ತಿರೋದು ನಿಜ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಆರೋಪವನ್ನು ಸಮರ್ಥನೆ ಮಾಡಿಕೊಂಡರು.

ಕಾಂಗ್ರೆಸ್ ಶಾಸಕರನ್ನ ಖರೀದಿ ಮಾಡಲು ಬಿಜೆಪಿಯವರು 50 ಕೋಟಿ ಆಮಿಷ ಕೊಟ್ಟಿದ್ದಾರೆ ಎಂಬ ಸಿಎಂ ಹೇಳಿಕೆಗೆ ವಿಧಾನಸೌಧದಲ್ಲಿ ‌ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ 50 ಕೋಟಿ ಅಫರ್ ನಮ್ಮ ಶಾಸಕರಿಗೆ ಮಾಡ್ತಿದ್ದಾರೆ. ನಮ್ಮ ಶಾಸಕರ ಜೊತೆ ಬಿಜೆಪಿ ಅವರು ಮಾತಾಡಿದ್ದಾರೆ. ಅದನ್ನ ನಮ್ಮ ಶಾಸಕರು ಸಿಎಂಗೆ ತಿಳಿಸಿದ್ದಾರೆ. ಮಿಕ್ಕಿದ ವಿಚಾರ ನಾನು ಮುಂದೆ ತಿಳಿಸುತ್ತೇನೆ‌ ಎಂದರು‌.

ನಮ್ಮ ಪಕ್ಷದ 50 ಶಾಸಕರಿಗೆ ತಲಾ 50 ಕೋಟಿ ಆಫರ್‌ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದರು. ಆಪರೇಷನ್‌ ಕಮಲ ಮೂಲಕ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ‘ಕೈ’ ನಾಯಕರು ಕಿಡಿಕಾರಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!