ಬಿಜೆಪಿ ಮುಸ್ಲಿಂ ವಿರೋಧಿಯಲ್ಲ-ಸರಕಾರದ ಧೋರಣೆ ವಿರೋಧಿ: ಬಿ.ವೈ.ವಿಜಯೇಂದ್ರ

ಹೊಸದಿಗಂತ ವರದಿ ಮಡಿಕೇರಿ:

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮುಸಲ್ಮಾನರ ಓಟ್ ಬ್ಯಾಂಕ್’ಗಾಗಿ ಹಿಂದೂ ವಿರೋಧಿ ಧೋರಣೆ ಅನುಸರಿಸುವುದರೊಂದಿಗೆ ಮುಸಲ್ಮಾನರ ಓಲೈಕೆಗೆ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಪಕ್ಷದ ವತಿಯಿಂದ ಆಯೋಜಿಸಲಾಗಿರುವ ಜನಾಕ್ರೋಶ ಯಾತ್ರೆಯಲ್ಲಿ ಪಾಲ್ಗೊಂಡು, ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಸರಕಾರದ‌ ಅನೇಕ ತೀರ್ಮಾನಗಳ ಹಿಂದೆ ಹಿಂದೂಗಳನ್ನು ಶೋಷಿಸುವ ಹುನ್ನಾರವಿದೆ. ಓಟ್ ಬ್ಯಾಂಕ್’ಗಾಗಿ ಮುಸಲ್ಮಾನರನ್ನು ಓಲೈಸಿ ಹಿಂದೂಗಳ ವಿರುದ್ಧ ಎತ್ತಿಕಟ್ಟುವ ಕಾಂಗ್ರೆಸ್ ಧೋರಣೆಗೆ ನಮ್ಮ ವಿರೋಧವೇ ಹೊರತು ಬಿಜೆಪಿ ಮುಸಲ್ಮಾನ ವಿರೋಧಿಯಲ್ಲ ಎಂದು ಹೇಳಿದರು.

ಕಾಶ್ಮೀರದಲ್ಲಿ ಮುಸಲ್ಮಾನರಿಗೆ ನ್ಯಾಯ ದೊರಕಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿತ್ತು. ಆದರೆ ಕಾಂಗ್ರೆಸ್’ನ ಪಾಕಿಸ್ತಾನ ಪ್ರೇಮ ಬಿಜೆಪಿಯ ಈ ಕಾರ್ಯಕ್ಕೆ ಅಡ್ಡಿಯಾಗಿದೆ ಎಂದ ವಿಜಯೇಂದ್ರ, ಬಿಜೆಪಿ ದೇಶದ್ರೋಹಿಗಳನ್ನು ವಿರೋಧಿಸುವ ಪಕ್ಷವಾಗಿದೆಯೇ ಹೊರತು ಮುಸಲ್ಮಾನರನ್ನು ವಿರೋಧಿಸುತ್ತಿಲ್ಲ ಎಂದು ನುಡಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದವರಿಗೆ ಸಿದ್ದರಾಮಯ್ಯ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ,ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎಟಿಎಂನಂತಾಗಿದೆ. ಪರಿಶಿಷ್ಟ ಜಾತಿ- ಪಂಗಡಕ್ಕೆ ಮೀಸಲಿಟ್ಟ ಅನುದಾನವನ್ನು ಸರ್ಕಾರ ವಿನಿಯೋಗ ಮಾಡದೇ ಬೇರೆ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದೆ ಎಂದೂ ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!