September 28, 2026
Monday, September 28, 2026
spot_img

ಕುಂಭಕರ್ಣನ ನಿದ್ದೆಯಲ್ಲಿರುವ ಸರ್ಕಾರವನ್ನ ಬಿಜೆಪಿ ಬಡಿದೆಬ್ಬಿಸುತ್ತಿದೆ: ವಿಜಯೇಂದ್ರ

ಹೊಸದಿಗಂತ ವರದಿ ಕೊಪ್ಪಳ:

ಕುಂಭಕರ್ಣನ ನಿದ್ದೆಯಲ್ಲಿರುವ ಸರ್ಕಾರ ಮತ್ತು ಮುಖ್ಯಮಂತ್ರಿಗಳನ್ನು ಬಿಜೆಪಿ ಬಡಿದೆಬ್ಬಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.

5ನೇ ದಿನದ ಬಳ್ಳಾರಿ ಚಲೋ ಪಾದಯಾತ್ರೆ ಅಂಗವಾಗಿ ಕಾರಟಗಿಯ ಎಪಿಎಂಸಿ ಯಾರ್ಡ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ನೆಪವೊಡ್ಡಿ ಗಾಳಿಯಲ್ಲಿ ಗೋಪುರ ಕಟ್ಟುತ್ತಿದೆ. ಇದು ಬಿಟ್ಟರೆ ಬೇರೇನೂ ಕೆಲಸವನ್ನೂ ಈ ಸರ್ಕಾರ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:

ಮುಂದಿನ ಬಾರಿ ತಮ್ಮದೇ ಸರ್ಕಾರ ಬರುತ್ತೆ ಎಂದು ಕಾಂಗ್ರೆಸ್ ಭ್ರಮೆಯಲ್ಲಿದೆ. ಎಲ್ಲ ವರ್ಗದ ಜನರಿಗೆ ಈ ಸರ್ಕಾರ ಅನ್ಯಾಯ ಮಾಡಿದೆ. ಆಡಳಿತ ಪಕ್ಷದ ಶಾಸಕರೇ ತಮ್ಮ ಸರ್ಕಾರ ಟೇಕಾಪ್ ಆಗಿಲ್ಲ ಅಂತಿದ್ದಾರೆ. ಇನ್ನಾದರೂ ಈ ಸರ್ಕಾರ ಎಚ್ಚೆತ್ತು ಬಡವರ, ರೈತರ ಬಗ್ಗೆ ಕಾಳಜಿಯನ್ನು ಸರ್ಕಾರ ತೋರಿಸಲಿ ಎಂದರು.

Must Read