ಹೊಸದಿಗಂತ ಹುಬ್ಬಳ್ಳಿ:
ರಾಜ್ಯದಲ್ಲಿ ನಮ್ಮ ಸರ್ಕಾರ ಉತ್ತಮ ಆಡಳಿತ ನೀಡುತ್ತಿರುವುದರಿಂದ ಸಹಿಸಲಾಗದೆ ಜಾತಿ, ಧರ್ಮ ನಡುವೆ ವೈಷಮ್ಯ, ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದಲ್ಲಿ ಆಗುವ ಎಲ್ಲ ಕೋಮು ಗಲಭೆಗಳಿಗೆ ನೇರಹೊಣೆ ಹೊತ್ತುಕೊಳ್ಳಬೇಕು. ಕೋಮು ಗಲಭೆ ಅವರೇ ಮಾಡುವಂಥದ್ದು. ಜನರ ಭಾವನೆ ಹೇಗೆ ಕೆರಳಿಸಬೇಕು ಎಂಬುದು ಅವರಿಗೆ ಗೊತ್ತಿದೆ ಎಂದರು.
ರಾಜಭವನದ ಗೌಪ್ಯ ಮಾಹಿತಿಗಳು ಸೋರಿಕೆಯಾಗಿರುವ ಬಗ್ಗೆ ರಾಜ್ಯಪಾಲರೇ ಉತ್ತರ ಕೊಡಬೇಕು. ರಾಜಭವನದ ಅಧಿಕಾರಿಗಳು ರಾಜ್ಯಪಾಲರ ನಿಯಂತ್ರಣದಲ್ಲಿ ಇರುತ್ತಾರೆ. ಅಲ್ಲಿ ಯಾರ ಇರಬೇಕು, ಅಧಿಕಾರಿಗಳು ಯಾರು ಬೇಕು ಎಂಬುದನ್ನು ಅವರೇ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.
ತಿರುಪತಿ ಲಡ್ಡು ವಿಚಾರದಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಜಗಮೋಹನ್ ರೆಡ್ಡಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ನನಗೆ ಗೊತ್ತಿಲ್ಲ.ಹಾಗಾಗಿ ಈ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.