ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಈಗಾಗಲೇ ರಾಜಕೀಯ ನಾಯಕರು ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿಸಿಗೊಂಡಿದ್ದಾರೆ. ಈ ಮದ್ಯೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರು ಕೂಡ ಈ ಬಾರಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರಕಾರದ ದುರಾಡಳಿತದಿಂದಾಗಿ ಜನರು ಬೇಸತ್ತಿದ್ದಾರೆ. ಈ ಚುನಾವಣೆ ಜನರಿಗೆ ತಮ್ಮ ನೋವು ಹೊರ ಹಾಕಲು ಅವಕಾಶ ಸಿಕ್ಕಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಜನರು ಬಿಜೆಪಿಗೆ ಮತ ಚಲಾಯಿಸುವ ಮೂಲಕ ಸರಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕುತ್ತಾರೆ ಎಂದು ಹೇಳಿದರು.
ಇದೇ ವೇಳೆ ಮದ್ಯಪ್ರಾಚ್ಯದಲ್ಲಿನ ಸಂಘರ್ಷ ದೇಶಕ್ಕೆ ದೊಡ್ಡ ಹೊಡೆತ ನೀಡಿಲ್ಲ. ಪ್ರಧಾನಿ ಮೋದಿ ಅವರು ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸಿದ್ದಾರೆ. ಹೀಗಾಗಿ ಯಾರಿಗೂ ಗ್ಯಾಸ್ ಸಿಲಿಂಡರ್ ಗಳ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಈಗಾಗಲೇ ದೇಶಕ್ಕೆ ಎಲ್ ಪಿಜಿ ಹೊತ್ತು ಹಡಗುಗಳು ಬರುತ್ತಿದೆ. ಹೀಗಾಗಿ ಯಾರು ಆತಂಕ ಪಡುವ ಅಗತ್ಯವಿಲ್ಲ. ಪ್ರಧಾನಿ ಅವರ ದೂರದೃಷ್ಟಿಯಿಂದ ದೇಶವು ಸುಭದ್ರವಾಗಿದೆ ಎಂದು ಹೇಳಿದರು.



