ಇಂದಿನಿಂದ ಮತ್ತೆ ಬಿಜೆಪಿ ಜನಸಂಕಲ್ಪ ಯಾತ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಮತ್ತೆ ಬಿಜೆಪಿ ಸಂಕಲ್ಪಯಾತ್ರೆ ಆರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಯಾತ್ರೆ ಪುನರಾರಂಭಗೊಳ್ಳಲಿದೆ.

ಉಡುಪಿ, ಗದಗ, ಹಾವೇರಿ, ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಯಾತ್ರೆ ನಡೆಯಲಿದೆ. ಸತತ ಮೂರು ದಿನ ಕಾರ್ಯಕ್ರಮಗಳಿದ್ದು, ಡಿಸೆಂಬರ್‌ವರೆಗೆ ಯಾತ್ರೆ ಮುಂದುವರಿಯಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಜನಸಂಕಲ್ಪ ಯಾತ್ರೆಗೆ ಎಲ್ಲೆಡೆ ಬೆಂಬಲ ಇದೆ, ಈ ಬಾರಿ ಮುಂಬಯಿ ಕರ್ನಾಟಕದಲ್ಲಿ ಯಾತ್ರೆ ನಡೆಯಲಿದೆ. ಯಾತ್ರೆಗಾಗಿ ದೆಹಲಿಯಿಂದ ಬೆಂಗಳೂರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ.

ಕಲಬುರಗಿ, ಸಿಂದಗಿ, ದಾವಣಗೆರೆ, ತುಮಕೂರಿನಲ್ಲಿ ನಡೆಯುವ ಯಾತ್ರೆಯಲ್ಲಿ ಅರುಣ್ ಸಿಂಗ್ ಭಾಗಿಯಾಗಲಿದ್ದಾರೆ. ಎರಡನೇ ಹಂತದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಜನ ಸಂಪರ್ಕ ಸಭೆ ನಡೆಯಲಿದೆ. ಬೆಳಗಾವಿಯಲ್ಲಿ ಮೂರು ಕಡೆಗಳಲ್ಲಿ ಸಭೆ ನಡೆಯಲಿದೆ. ಒಂದೇ ಕಡೆ ಮೂರು ಭಾಗಗಳಲ್ಲಿ ಸಭೆ ನಡೆಸಿ ಕಾರ್ಯಕರ್ತರನ್ನು ಒಗ್ಗೂಡಿಸುವ ಪ್ರಯತ್ನ ಮಾಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!