ಇಂದಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ, ರಾಯಚೂರಿನಲ್ಲಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗುತ್ತಿದ್ದು, ರಾಯಚೂರಿನಲ್ಲಿ ಯಾತ್ರೆಗೆ ಚಾಲನೆ ದೊರಕಲಿದೆ. ಪಕ್ಷ ಮತ್ತು ಜನಸಂಘಟನೆಗಾಗಿ ಸಿಎಂ ಬೊಮ್ಮಾಯಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ.

ಒಟ್ಟು 26  ದಿನಗಳು ಯಾತ್ರೆ ನಡೆಯಲಿದ್ದು, ಡಿಸೆಂಬರ್ 25 ಕ್ಕೆ ಮುಕ್ತಾಯವಾಗಲಿದೆ. ರಾಯಚೂರು, ಕೊಪ್ಪಳ, ವಿಜಯಪುರ, ವಿಜಯನಗರ,ಬೀದರ್, ಯಾದಗಿರಿ, ಕಲಬುರ್ಗಿ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಉತ್ತರಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ,ಚಿತ್ರದುರ್ಗ, ಕೋಲಾರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ, ಬಾಗಲಕೋಟೆ, ಮೈಸೂರು, ಹಾಸನ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಯಾತ್ರೆ ಹಾದುಹೋಗಲಿದೆ.

ಏಳು ಸಮಾವೇಶಗಳು ನಡೆಯಲಿದ್ದು, ಇದರಲ್ಲಿ ಒಂದು ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!