ರಾಜ್ಯದಲ್ಲಿ ಶೀಘ್ರದಲ್ಲಿಯೇ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ: ನಿಖಿಲ್

ಹೊಸದಿಗಂತ ವರದಿ, ಕೆ.ಆರ್.ಪೇಟೆ:

ಅತಿ ಶೀಘ್ರದಲ್ಲಿಯೇ ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ಒಗ್ಗೂಡಿ ರಾಜ್ಯವನ್ನು ಕಟ್ಟಲಿದ್ದಾರೆಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ತಮ್ಮ ತಂದೆ ಹೆಚ್.ಡಿ.ಕುಮಾರಸ್ವಾಮಿ ಪರ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರೋಡ್ ಶೋ ಹಾಗೂ ಪ್ರಚಾರ ಸಭೆಗಳನ್ನು ನಡೆಸಿ ಮಾತನಾಡಿದ ಅವರು ಏಪ್ರಿಲ್ 26 ರ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮತನೀಡಿ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.

ಸುಮಾರು ಘಂಟೆಗಳ ಕಾಲ ತಡವಾಗಿ ತಾಲೂಕಿಗೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರನ್ನು ತಾಲೂಕಿನ ಗಡಿ ಭಾಗವಾದ ಅಶೋೀಕ ನಗರದ ಬಳಿ ಶಾಸಕ ಹೆಚ್.ಟಿ.ಮಂಜು ಮತ್ತು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ನೇತೃತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಅಬೂತ ಪೂರ್ವ ಸ್ವಾಗತ ನೀಡಿ ಜಯಘೋಷಗಳ ಮೂಲಕ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟೂರು ಬೂಕನಕೆರೆಯಿಂದ ಪ್ರಚಾರ ಯಾತ್ರೆ ಆರಂಭಿಸಿದ ನಿಖಿಲ್ ಕುಮಾರಸ್ವಾಮಿ ಅನಂತರ ಅಕ್ಕಿಹೆಬ್ಬಾಳು ಹೋಬಳಿಯ ಸೋಮನಹಳ್ಳಿ, ಆಲಂಬಾಡಿ ಕಾವಲು, ಅಕ್ಕಿಹೆಬ್ಬಾಳು, ಬೀರವಳ್ಳಿ, ಮಂದಗೆರೆ, ಕಿಕ್ಕೇರಿ ಹೋಬಳಿಯ ದಬ್ಬೇಘಟ್ಟ, ಮಾದಾಪುರ, ಆನೆಗೊಳ, ಐಕನಹಳ್ಳಿ, ಲಕ್ಷ್ಮೀಪುರ, ಕಿಕ್ಕೇರಿ, ಚೌಡೇನಹಳ್ಳಿ ಮತ್ತು ಕಸಬಾ ಹೋಬಳಿಯ ಹಿರೀಕಳಲೆ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಸಂಚರಿಸಿ ಮತಯಾಚನೆ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!