ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ: ಕುಮಾರಸ್ವಾಮಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾ ಎಂಬ ಚರ್ಚೆಗಳು ನಡೆಯುತ್ತಿದ್ದು, ಈ ನಡುವೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ.ಬಿಜೆಪಿ ಜೊತೆ ಮೈತ್ರಿ ಎಂಬುದು ಕೇವಲ ವದಂತಿ ಎಂದಿದ್ದಾರೆ.

ರಾಜಕಾರಣದಲ್ಲಿ ಚರ್ಚೆ, ಊಹಾಪೋಹಗಳು ಹುಟ್ಟುವುದು ಸಹಜ. ಕೆಲವೊಮ್ಮೆ ಗಾಳಿ ಸುದ್ದಿಯನ್ನು ಚರ್ಚೆ ಮಾಡ್ತಾರೆ. ಇದಕ್ಕೆಲ್ಲ ಚುನಾವಣೆ ಪ್ರಕ್ರಿಯೆ ಆರಂಭವಾದಾಗ ಉತ್ತರ ಸಿಗಲಿದೆ. ಅಂತಹ ಯಾವುದೇ ಚರ್ಚೆಗಳು ನನ್ನ ಮುಂದೆ ನಡೆದಿಲ್ಲ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!