ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಆಬಾಧಿತ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಜನಮೆಚ್ಚುವ ಆಡಳಿತವನ್ನು ನೀಡಿದ್ದೇವೆ. ಎರಡೂ ಪಕ್ಷಗಳ ನಡುವೆ ಯಾವುದೇ ಗೊಂದಲವಿಲ್ಲ. ಮೈತ್ರಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಳೆಯಿಂದ ಹಲವು ಕಡೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮಳೆಯಿಂದ ಬೆಳೆ ಹಾನಿಯ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ ಎಂದು ಹೇಳಿದರು. ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ 9 ಕೈಗಾರಿಕಾ ಕ್ಲಸ್ಟರ್ ಆರಂಭ ಮಾಡಲಾಗಿತ್ತು. ಇದರಿಂದ ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಉದ್ದೇಶವಿತ್ತು. ಆದರೆ ಆ ಯೋಜನೆಯನ್ನು ರಾಜ್ಯ ಸರ್ಕಾರ ಮುಂದುವರಿಸಿಲ್ಲ. ಜೊತೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ರಸ್ತೆ ಗುಂಡಿ ಮುಚ್ಚಿಲ್ಲ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಬಿ ಖಾತಾಯಿಂದ ಎ ಖಾತಾಗೆ ಪರಿವರ್ತನೆ ಮಾಡಿಕೊಳ್ಳಲು ಸರ್ಕಾರ ಜನರಿಗೆ ಅವಕಾಶ ಮಾಡಿಕೊಟ್ಟಿದ್ದು, ಇದು ಜನರಿಂದ ಮತ್ತೊಮ್ಮೆ ಹಣ ಮಾಡುವ ಉದ್ದೇಶ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಆಬಾಧಿತ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟೋಕ್ತಿ

