ಹೊಸದಿಗಂತ ವರದಿ ಕಲಬುರಗಿ:
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿಯಿಂದ ರಾಜ್ಯ ಕಾಂಗ್ರೆಸ್‌ಗೆ ನಡುಕ ಶುರುವಾಗಿದೆ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಪಕ್ಷಗಳ ಮೈತ್ರಿ ವಿಚಾರವಾಗಿ ನಮ್ಮ ಪಕ್ಷದಲ್ಲಿ ಯಾರು ಸಹ ವಿರೋಧ ಮಾಡಿಲ್ಲ. ಆದರೆ, ಕೆಲವರು ಸಣ್ಣ ಪುಟ್ಟ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದು, ಅವೆಲ್ಲವೂ ಪಕ್ಷದೊಳಗಡೆಯಲ್ಲಿ ಬಗೆಹರಿಸಿಕೊಳ್ಳುತ್ತೇವೆ ಎಂದರು.
ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಆಟಕ್ಕೆ ಬ್ರೇಕ್ ಬಿದ್ದಿದ್ದು, ಅವರಿಗೀಗ ಭಯ ಶುರುವಾಗಿದೆ. ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾದ ಒಂದೇ ವರುಷದಲ್ಲಿ ಆಡಳಿತ ವಿರೋಧಿ ಅಲೆ ಆರಂಭವಾಗಲಿದೆ. ಆದರೆ, ಕಾಂಗ್ರೆಸ್ ಸಕಾ೯ರಕ್ಕೆ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಆರೀಭವಾಗಿದೆ ಎಂದರು.
ಪ್ರತಿ ಗ್ರಾಮ ಪಂಚಾಯತ್‌ಗೆ ಒಂದು ಮದ್ಯದಂಗಡಿ ಕೊಡುತ್ತೇವೆ ಎಂದು ಹೇಳುತ್ತಿದ್ದು, ಇನ್ನೊಂದೆಡೆ ಗ್ಯಾರಂಟಿ ಕೊಟ್ಟು ಬಡವರಿಗೆ ತೊಂದರೆ ಕೊಡುವ ಕೆಲಸ ಆರಂಭಿಸಿದ್ದಾರೆ ಎಂದರು.
ಕುಮಾರಸ್ವಾಮಿ ಬಿಜೆಪಿಯವರ ಕಾಲಿಗೆ ಬಿದ್ದು ಬಂದಿದ್ದಾರೆ ಎಂಬ ಪ್ರಿಯಾಂಕ್ ಖಗೆ೯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಈ ರೀತಿ ಮಾತುಗಳು ಆಡುವುದು ಸರಿಯಲ್ಲ. ಮೈತ್ರಿ ವಿಚಾರದಿಂದ ಹತಾಶರಾಗಿ ಈ ರೀತಿ ಹೇಳಿಕೆಗಳನ್ನು ಕಾಂಗ್ರೆಸ್ ಪಕ್ಷದ ನಾಯಕರು ನೀಡುತ್ತಿದ್ದಾರೆ ಎಂದರು.