ಲೋಕಸಭೆ ಚುನಾವಣೆ ಬಳಿಕವೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ: ಹೆಚ್​ಡಿ ದೇವೇಗೌಡ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆ ಚುನಾವಣೆ (Lok Sabha Elections) ನಂತರವೂ ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಮುಂದುವರಿಯಲಿದೆ ಎಂದು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ (HD Deve Gowda) ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಈ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹೇಳಿಕೆ ಬೆನ್ನಲ್ಲೇ ದಳಪತಿ ಈ ಘೋಷಣೆ ಮಾಡಿದ್ದಾರೆ.

ತುಮಕೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ದೇವೇಗೌಡ, ಚುನಾವಣೆ ಮುಗಿದ ಮೇಲೇಯೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯುತ್ತದೆ. ಈ ಸಂಬಂಧ ಕಾಪಾಡುಕೊಂಡು‌ ಹೋಗುತ್ತೇವೆ. ನಮ್ಮ ಬಾಂಧವ್ಯ ತಾತ್ಕಾಲಿಕವಲ್ಲ. ಈ ಬಾಂಧವ್ಯವನ್ನ ಮುಂದುವರೆಸಿಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!