Monday, October 6, 2025

ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತೆ: ಹೆಚ್‌ಡಿಡಿ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕೀಯದಲ್ಲಿ ಮೈತ್ರಿ ಕುರಿತ ಚರ್ಚೆ ನಡೆಯುತ್ತಿರುವ ಸಂದರ್ಭ, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಮಹತ್ವದ ಹೇಳಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಅಚಲವಾಗಿ ಮುಂದುವರಿಯಲಿದೆ ಎಂದು ಅವರು ಘೋಷಿಸಿದ್ದಾರೆ.

ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ದೇವೇಗೌಡರು, “ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು, ವಿಧಾನಸಭೆ, ಎಲ್ಲ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ. ಯಾವುದೇ ಕಾರಣಕ್ಕೂ ಈ ಮೈತ್ರಿಗೆ ಭಂಗ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ತಮ್ಮ ಬಾಂಧವ್ಯವನ್ನು ಉಲ್ಲೇಖಿಸಿ, “ನಾನು ಕಳೆದ 10 ವರ್ಷಗಳಲ್ಲಿ ಮೋದಿ ಬಗ್ಗೆ ಕೆಟ್ಟ ರೀತಿಯಲ್ಲಿ ಮಾತನಾಡಿಲ್ಲ. ಯಾರಾದರೂ ಇದಕ್ಕೆ ವಿರುದ್ಧದ ಸಾಕ್ಷಿ ತೋರಿಸಲು ಸಾಧ್ಯವಿಲ್ಲ. ನಮ್ಮ ಸಂಬಂಧ ಉತ್ತಮವಾಗಿದ್ದು, ಇದೇ ಈ ಮೈತ್ರಿಗೆ ಅಡಿಪಾಯವಾಗಿದೆ” ಎಂದು ಹೇಳಿದರು.