ರಾಜ್ಯದ 28 ಕ್ಷೇತ್ರದಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲುವು: ರಾಧಾ ಮೋಹನದಾಸ್ ಅಗರ್ವಾಲ್

 ಹೊಸದಿಗಂತ ವರದಿ,ದಾವಣಗೆರೆ:

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಠೇವಣಿ ಕಳೆದುಕೊಳ್ಳಲಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ 3-4 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಕಾಂಗ್ರೆಸ್ಸಿನ ಡಿ.ಕೆ.ಸುರೇಶ ವಿರುದ್ಧ ಮೂರ್‍ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ. ದಾವಣಗೆರೆ ಸೇರಿದಂತೆ ರಾಜ್ಯದ 28 ಕ್ಷೇತ್ರದಲ್ಲೂ ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಲಿದೆ. ಇಡೀ ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ನಾಶವಾಗಿದ್ದು, ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೇಶಾದ್ಯಂತ 30-35 ಸ್ಥಾನಗಳಷ್ಟೇ ಬರಬಹುದು ಎಂದರು.

ನಾವು ಯಾವುದೇ ಗ್ಯಾರಂಟಿಗಳ ಬಗ್ಗೆ ಹೇಳುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿಯವರೇ ನಮಗೆ ಗ್ಯಾರಂಟಿ. ಇಡೀ ದೇಶದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಕಾಂಗ್ರೆಸ್ಸಿನವರಂತೆ ನಾವು ಭಾಷಣ ಮಾಡುತ್ತಾ ಸುತ್ತಾಡುತ್ತಿಲ್ಲ. ನಾವು ಈ ಚುನಾವಣೆ ಬಗ್ಗೆ ಚರ್ಚಿಸುವುದಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು ಒಂದು ನೂರು ವರ್ಷವಾಗುವ ಚುನಾವಣೆ ಬಗ್ಗೆ ಈಗಾಗಲೇ ಚರ್ಚೆ ನಡೆಯುತ್ತಿದೆ ಎಂದು ಅವರು ಸೂಚ್ಯವಾಗಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!