ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಉಪಚುನಾವಣೆ ಗೆಲುವಿನ ಬಗ್ಗೆ ಡಿ.ಕೆ.ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೈ ಎಲೆಕ್ಷನ್ ನಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಗೆಲುವು ಸಾಧಿಸಿದ್ದು, ಈ ಗೆಲುವಿಗೆ ವಿಪಕ್ಷಗಳೂ ಕಾರಣ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಚನ್ನಪಟ್ಟಣ ಗೆಲುವಿನಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ನೇರ ಮತ್ತು ಪರೋಕ್ಷ ಬೆಂಬಲದಿಂದಲೇ ನಾವು ಗೆದ್ದಿದ್ದೇವೆ ಎಂದು ತಿಳಿಸಿದ್ದಾರೆ.
ಬಿಜೆಪಿ, ಜೆಡಿಎಸ್ ನಾಯಕರು ನಮಗೆ ಸಹಾಯ ಮಾಡಿದ್ದಾರೆ. ಕಾಂಗ್ರೆಸ್ ಕೇವಲ 16,000 ಮತಗಳನ್ನು ಪಡೆದಿದೆ. ಜೆಡಿಎಸ್ ನಾಯಕರೂ ನಮಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಈ ಗೆಲುವು ಸಾಧ್ಯವಾಗಿದೆ. ಅಭಿವೃದ್ಧಿಯಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಹೊಸ ಬಾಂಬ್ ಹಾಕಿದ್ದಾರೆ.