ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ನಿವೇಶನ ಹಂಚಿಕೆ ಹಾಗೂ ವಾಲ್ಮೀಕಿ ಕಂಪನಿಯ ಬಹುಕೋಟಿ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಹೋರಾಟ ತೀವ್ರಗೊಳ್ಳುತ್ತಿದೆ. ಸದನದ ಬಾವಿಗಿಳಿದು ಬಹುಕಾಲದಿಂದ ವಾಗ್ವಾದಕ್ಕಿಳಿದಿದ್ದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಬುಧವಾರದಿಂದ ಒಂದು ಗಂಟೆ ಕಾಲ ಧರಣಿ ಆರಂಭಿಸಿದ್ದಾರೆ.
ದಲಿತರ ಹಣ ದೋಚುವುದು, ಹಣವೂ ಲೂಟಿ, ಇತ್ತ ಮುಡಾವೂ ಲೂಟಿ, ಹಗರಣಗಳ ಸರದಾರ ಭಿತ್ತಿಪತ್ರಗಳ ಜೊತೆ ಧರಣಿ ನಡೆಸಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ಜೆಡಿಎಸ್ ಮುಖಂಡರು ಘೋಷಣೆ ಕೂಗಿದರು.
ಧರಣಿ ಹಿನ್ನಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಭಜನೆ, ಗೀತೆಗಳೊಂದಿಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕಂಜಿರಾ, ತಾಳ ಬಡಿಯುತ್ತಾ ಭಜನೆ ಜೊತೆಗೆ ಸಿನಿಮಾದ ಹಾಡುಗಳನ್ನೂ ಹಾಡಿದ್ದಾರೆ.
ವಿರೋಧ ಪಕ್ಷದ ನಾಯಕ ಅಶೋಕ್, ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಬಿಜೆಪಿ ಸದಸ್ಯರು ವಿಧಾನಸೌಧದ ಕಾರಿಡಾರ್ನಲ್ಲಿ ಭಜನೆ ಮಾಡುತ್ತಾ ಹೆಜ್ಜೆ ಹಾಕಿದರು.