ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ್ದ ಬಿಜೆಪಿ-ಜೆಡಿಎಸ್ ನಾಯಕರಿಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶದಿಂದ ಇನ್ನಷ್ಟು ಬಲ ಬಂದಂತಾಗಿದೆ. ಇದನ್ನೇ ಬಳಸಿಕೊಂಡು ಹೋರಾಟಕ್ಕಿಳಿದಿರೋ ದೋಸ್ತಿಗಳು ಇಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್‌ನ ನಾಯಕರು ಪ್ರತಿಭಟನೆ ನಡೆಸಿ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಭಟನೆ ವೇಳೆ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಈ ಹಿಂದೆ ನೀಡಿದ್ದ ಹೇಳಿಕೆಯೊಂದರ ವಿಡಿಯೋ ಪ್ರದರ್ಶನ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಂದಿನ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದ ವಿಡಿಯೋ ಪ್ರದರ್ಶಿಸಿದ್ದಾರೆ.