ಕಾಂಗ್ರೆಸ್‌ ಮುಕ್ತ ಭಾರತದೆಡೆ ಮತ್ತೊಂದು ಹೆಜ್ಜೆ: ಕಾಂಗ್ರೆಸ್‌ ವಿರುದ್ಧ ರಾಜ್ಯ ಬಿಜೆಪಿ ಟೀಕಾಪ್ರಹಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಂಚರಾಜ್ಯ ಚುನಾವಣಾ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ಹೊರಬೀಳುತ್ತಿದ್ದಂತೆ ಬಿಜೆಪಿ ಕಚೇರಿಗಳಲ್ಲಿ ಸಂಭ್ರಮಾಚರಣೆ ಶುರುವಾಗಿದೆ. ಇನ್ನು 5 ರಾಜ್ಯಗಳಲ್ಲೂ ಸೋಲುಂಡ ಕಾಂಗ್ರೆಸ್‌ ಗೆ ಕರ್ನಾಟಕ ಬಿಜೆಪಿ ಟೀಕಿಸಿದೆ.
ಈ ಬಗ್ಗೆ ಸರಣಿ ಟ್ವೀಟ್‌ ಮಾಡಿದ ಬಿಜೆಪಿ ಕರ್ನಾಟಕ, ಟ್ವೀಟ್‌ ಗಳ ಜತೆಗೆ ಕಾಂಗ್ರೆಸ್‌ ಮುಕ್ತ ಭಾರತ ಎಂಬ ಹ್ಯಾಷ್‌ ಟ್ಯಾಗ್‌ ಹಾಕಿ ಟ್ರೆಂಡ್‌ ಮಾಡುತ್ತಿದೆ.
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕಾಂಗ್ರೆಸ್‌ ಮುಕ್ತ ಭಾರತ ಎಂಬ ಸಂಕಲ್ಪದತ್ತ ಮತ್ತೊಂದು ಹೆಜ್ಜೆಯಿಟ್ಟಿದೆ. ದೇಶದ ಜನತೆಗೆ ಕೃತಜ್ಞತೆಗಳು ಎಂದಿದೆ.
ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಅಭಿವೃದ್ಧಿ ಮತ್ತು ರಾಷ್ಟ್ರೀಯ ವಿಚಾರಧಾರೆಯ ಪರವಾಗಿ ರಾಷ್ಟ್ರದ ಜನ ನಿಂತಿದ್ದಾರೆ ಎಂಬುದನ್ನು ಈ ಫಲಿತಾಂಶ ಮತ್ತೊಮ್ಮೆ ಸಾಬೀತುಮಾಡಿದೆ.
ಗೋವಾ ರಾಜ್ಯದ ಫಲಿತಾಂಶ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಅಧಿಕಾರದ ಕನಸು ಕಂಡಿತ್ತು. ಕೂಸು ಹುಟ್ಟುವುದಕ್ಕೆ ಮುನ್ನವೇ ಕುಲಾವಿ ಹೊಲಿಸಲು ಹೋದ ಕಾಂಗ್ರೆಸ್ ಪಕ್ಷಕ್ಕೆ ಗೋವಾದ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಕಾಂಗ್ರೆಸ್ಸಿಗರೇ, ಹಗಲು ಕನಸು ಕಾಣುವುದನ್ನು ನಿಲ್ಲಿಸಿ ಎಂದು ಬರೆದುಕೊಂಡಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!