ಮುಂಬೈ ಉತ್ತರದಲ್ಲಿ ಉಗ್ರ ಕಸಬ್‌ ಗಲ್ಲಿಗೆ ಕಾರಣವಾದ ವಕೀಲ ಉಜ್ವಲ್‌ ನಿಕಂಗೆ ಮಣೆ ಹಾಕಿದ ಬಿಜೆಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸತತ ಎರಡು ಬಾರಿಗೆ ಹಾಲಿ ಸಂಸದೆಯಾಗಿ ಕಾರ್ಯನಿರ್ವಹಿಸಿದ್ದ ಪೂನಂ ಮಹಾಜನ್‌ಗೆ ಕೊಕ್‌ ನೀಡಿ ಖ್ಯಾತ ವಕೀಲ ಉಜ್ವಲ್‌ ನಿಕಂಗೆ ಪಕ್ಷ ಮಣೆ ಹಾಕಿದೆ .

ಇತ್ತ ಕಾಂಗ್ರೆಸ್‌ ಎಂದಿನ ಅಭ್ಯರ್ಥಿಯಾಗಿದ್ದ ನಟಿ ಪ್ರಿಯಾ ಸುನಿಲ್‌ ದತ್‌ರನ್ನು ಕೈಬಿಟ್ಟು ನಗರಾಧ್ಯಕ್ಷೆ ವರ್ಷಾ ಗಾಯಕ್ವಾಡ್‌ಗೆ ಟಿಕೆಟ್‌ ನೀಡಿದೆ.

ಹಾಲಿ ಸಂಸದೆ ಪೂನಂ ಮಹಾಜನ್‌ ತಮ್ಮ ತಂದೆ ಪ್ರಮೋದ್‌ ಮಹಾಜನ್‌ ಅವರಂತೆಯೇ ಸಂಸತ್ತಿನವೊಳಗೆ ಮತ್ತು ಹೊರಗೆ ತಮ್ಮ ಪ್ರಖರ ಮಾತುಗಳ ಮೂಲಕ ಪ್ರತಿಪಕ್ಷಗಳ ಟೀಕೆ ಮತ್ತು ಆರೋಪಗಳಿಗೆ ಪ್ರತ್ಯುತ್ತರ ನೀಡಿ ಗಮನ ಸೆಳೆದಿದ್ದರೂ, ಕ್ಷೇತ್ರದಲ್ಲಿ ಆಕೆಯ ಕುರಿತು ನಕಾರಾತ್ಮಕ ಅಭಿಪ್ರಾಯ ಉಂಟಾದ ಹಿನ್ನೆಲೆಯಲ್ಲಿ ಜನಪ್ರಿಯ ಅಭ್ಯರ್ಥಿಗೆ ಬಿಜೆಪಿ ಮಣೆ ಹಾಕಿದೆ.

ಖ್ಯಾತ ವಕೀಲ ಉಜ್ವಲ್‌ ನಿಕಂ ಅವರು 1993ರಿಂದ ಹಿಡಿದು 26/11 ರ ಸರಣಿ ಬಾಂಬ್‌ ಪ್ರಕರಣದಲ್ಲಿ ಉಗ್ರ ಕಸಬ್‌ಗೆ ಗಲ್ಲು ಶಿಕ್ಷೆಯಾಗುವ ತನಕ ಹಲವು ಹೈ ಪ್ರೊಫೈಲ್‌ ಕೇಸ್‌ನಲ್ಲಿ ವಾದ ಮಂಡಿಸಿದ್ದು, ಇದೀಗ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಕಾಂಗ್ರೆಸ್‌ ಪಕ್ಷ ಕಳೆದ ಮೂರು ಬಾರಿಯಿಂದ ಕ್ಷೇತ್ರಕ್ಕೆ ಸ್ಪರ್ಧಿಸುತ್ತಿದ್ದ ಬಾಲಿವುಡ್‌ ನಟಿ ಸುಪ್ರಿಯಾ ಸುನಿಲ್‌ ದತ್‌ ಅವರನ್ನು ಬದಲಿಸಿ ಮುಂಬೈ ನಗರದ ಕಾಂಗ್ರೆಸ್‌ ಅಧ್ಯಕ್ಷೆ ವರ್ಷಾ ಗಾಯಕ್ವಾಡ್‌ ಅವರಿಗೆ ಮಣೆ ಹಾಕಿದೆ. ಇದರ ಹಿಂದೆ ಪ್ರಮುಖವಾಗಿ ಕಾಂಗ್ರೆಸ್‌ ಪಕ್ಷ ಜಾತಿ ಅಸ್ತ್ರವನ್ನು ಬಳಸಿದ್ದು, ಪ್ರಬಲ ಮರಾಠ ಸಮುದಾಯದ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ಮಹಾರಾಷ್ಟ್ರದಲ್ಲಿ ಈ ಬಾರಿ ರಾಜಕೀಯ ಸಮೀಕರಣಗಳು ಬದಲಾಗಿದ್ದರೂ ಕಾಂಗ್ರೆಸ್‌ಗೆ ಕ್ಷೇತ್ರದಲ್ಲಿ ಉತ್ತಮ ನೆಲೆಯಿದೆ. ಅದನ್ನು ಲಾಭ ಮಾಡಿಕೊಂಡು ಸರಿಯಾದ ರೀತಿಯಲ್ಲಿ ಪ್ರಚಾರ ನಡೆಸಿದರೆ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವುದರಲ್ಲಿ ಅನುಮಾನವಿಲ್ಲ. ಈ ಭಾಗವಾಗಿ ಕಾಂಗ್ರೆಸ್‌ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಒಳಗಿನವರು ವರ್ಸಸ್‌ ಹೊರಗಿನವರು ಎಂಬ ಅಭಿಯಾನ ಆರಂಭಿಸಿದೆ. ವರ್ಷಾ ಇದೇ ಕ್ಷೇತ್ರದ ವಿಲ್ಲೆ ಪಾರ್ಲೆ ನಿವಾಸಿಯಾಗಿದ್ದರೆ ಉಜ್ವಲ್‌ ಪಕ್ಕದ ಬಾಂದ್ರಾದಲ್ಲಿ ವಾಸಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!