June 26, 2026
Friday, June 26, 2026
spot_img

ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಸಿಡಿದೆದ್ದ ಬಿಜೆಪಿ: ಮುಂಬೈಯಲ್ಲಿ ರಾಹುಲ್‌ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆ ವಿರುದ್ಧ ದೇಶಾದ್ಯಂತ ಬಿಜೆಪಿ ಕಾರ್ಯಕರ್ತ ಆಕ್ರೋಶ ವ್ಯಕ್ತಪಡಿಸಿದ್ದು, ದೆಹಲಿ, ಸೂರತ್, ಮುಲುಂಡ್ ಮತ್ತು ಹೈದರಾಬಾದ್ ಸೇರಿದಂತೆ ಇತರ ಕಡೆಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದ್ದಾರೆ.

ಮಹಾರಾಷ್ಟ್ರದಲ್ಲಿ ಥಾಣೆಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆರಳುತ್ತಿದ್ದಾಗ, ಬಿಜೆಪಿ ಕಾರ್ಯಕರ್ತರು ಅವರಿಗೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ. ‘ಲಷ್ಕರ್-ಎ-ರಾಹುಲ್’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.

ನಿನ್ನೆ ದೆಹಲಿಯ ಎಐ ಶೃಂಗಸಭೆಯ ಸ್ಥಳದಲ್ಲಿರುವ ಸಭಾಂಗಣಕ್ಕೆ ಶರ್ಟ್ ಧರಿಸದ ಯುವ ಕಾಂಗ್ರೆಸ್ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ನುಗ್ಗಿದರು. ನಾಲ್ವರು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !