May 20, 2026
Wednesday, May 20, 2026
spot_img

ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಬಿಜೆಪಿ: ದೇಶದ ಜನರಿಗೆ ಮಾಡಿದ ಅಪಮಾನ ಎಂದು ಗುಡುಗಿದ ನಿತೀನ್ ನಬಿನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಾಲಿಗೆ ಹರಿಬಿಟ್ಟ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದ್ದು, ರಾಹುಲ್ ಗಾಂಧಿ ಇಡೀ ದೇಶಕ್ಕೆ ಅವಮಾನ ಮಾಡಿದ್ದಾರೆ. ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.

ಮಾನಸಿಕ ಸಮತೋಲ ಸರಿಯಿಲ್ಲ

ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್​, ರಾಹುಲ್ ಗಾಂಧಿಯಮಾತುಗಳು ಅವರಲ್ಲಿನ ಅರಾಜಕತೆಯ ಮನಸ್ಥಿತಿ ಮತ್ತು ವಿಕೃತ ಗುಣವನ್ನು ಪ್ರತಿಬಿಂಬಿಸುತ್ತವೆ. ಇದರಿಂದ ಚುನಾವಣೆಯಲ್ಲಿ ಸೋಲಿನ ಹತಾಶೆ ಮತ್ತು ನಿರಾಶೆ ಎದ್ದು ಕಾಣುತ್ತಿದ್ದು, ರಾಹುಲ್​ ಗಾಂಧಿ ತಮ್ಮ ಮಾನಸಿಕ ಸಮತೋಲನವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ದೇಶದ ಜನರಿಗೆ ಅಪಮಾನ

ಇಂದು ದೇಶದಲ್ಲಿ ಭಯೋತ್ಪಾದನೆಯನ್ನು ಕೊನೆಗೊಳಿಸಿದವರು, ನಕ್ಸಲಿಸಂಗೆ ಅಂತ್ಯ ಹೇಳಿದವರು, ವಿಶ್ವಮಟ್ಟದಲ್ಲಿ ಭಾರತದ ತ್ರಿವರ್ಣ ಧ್ವಜದ ಗೌರವವನ್ನು ಹೆಚ್ಚಿಸಿದ್ದವರಿಗೆ ಇಂತಹ ಕೀಳು ಮಟ್ಟದ ಪದಗಳನ್ನು ಬಳಸುತ್ತೀರಾ? ಎಂದು ಗುಡುಗಿದ ನವೀನ್​, ರಾಹುಲ್ ಗಾಂಧಿ ಇಡೀ ದೇಶದ ಜನರಿಗೆ ಅಪಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.

ರಾಯಬರೇಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ವಿವಿಧ ವಿಷಯಗಳ ಕುರಿತು ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾರನ್ನು ದೇಶದ್ರೋಹಿಗಳು ಎಂದು ಕರೆದಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !