ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಕಾಸ್ತ್ರದಿಂದ ಹಲ್ಲೆ

ಹೊಸದಿಗಂತ ವರದಿ,ಕಲಬುರಗಿ:

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ, ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ ಹಾಗೂ ಅವರ ಬೆಂಬಲಿಗರ ಮೇಲೆ ಮಾರಕಾಸ್ತ್ರ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ನಡೆದಿದೆ.

ಸಂತ ಸೇವಾಲಾಲ್ ಮಹಾರಾಜರ ಜಯಂತಿ ಅಂಗವಾಗಿ ನಡೆದ ಮೆರವಣಿಗೆಯ ಸಮಯದಲ್ಲಿ ಕಾಂಗ್ರೆಸ್ ಕಾಯ೯ಕತ೯ರಿಂದ ಮಾರಕಾಸ್ತ್ರ ಹಾಗೂ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ ಆರೋಪ ಮಾಡಿದ್ದಾರೆ.

ಹಲ್ಲೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ ಅವರು ಬೆಂಬಲಿಗರಾದ ಶಾಂತಕುಮಾರ್ ಹಾಗೂ ಅನಿಲ್ ಎಂಬುವವರ ತಲೆಗೆ ಗಾಯಗಳಾಗಿವೆ.ಹಾಗೂ ಮುಖಂಡ ಮಣಿಕಂಠ್ ರಾಠೋಡ ಅವರು ಫಾಚು೯ನರ್ ಕಾರ್ ಮೇಲೂ ಸಹ ಕಲ್ಲು ಎತ್ತಿ ಹಾಕಿ ವಾಹನವನ್ನು ಜಖಂ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ ಆರೋಪಿಸಿದ್ದಾರೆ.

ಚಿತ್ತಾಪುರ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವ ಮಣಿಕಂಠ ರಾಠೋಡ, ಕಾಂಗ್ರೆಸ್ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರಿಂದ ಹಲ್ಲೆ ಮಾಡಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!