ಹೃದಯಾಘಾತ: ಬಿಜೆಪಿ ಮುಖಂಡ ಬಿ. ಸತೀಶ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಆಘಾತವಾಗಿದೆ. ಸಚಿವ ಡಾ.ಸುಧಾಕರ್​​​​ ಬೆಂಬಲಿಗ ಬಿಜೆಪಿ ಮುಖಂಡ ಬಿ.ಸತೀಶ್​​ (56) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಕರಗ ಉತ್ಸವ ಹಿನ್ನೆಲೆ ಸಚಿವ ಡಾ.ಸುಧಾಕರ್​ ಜತೆ ಧರ್ಮರಾಯಸ್ವಾಮಿ ದೇಗುಲಕ್ಕೆ ಸತೀಶ್ ಭೇಟಿ ನೀಡಿದ್ದರು. ಬಳಿಕ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು.

ಇಂದು ಮುಂಜಾನೆ ಚಿಕ್ಕಬಳ್ಳಾಪುರದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!