ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲಾ ಬಿಜೆಪಿ ಹಿರಿಯ ಮುಖಂಡ, ಅಮ್ಮತ್ತಿ ಕೊಡವ ಸಮಾಜದ ಮಾಜಿ ಅಧ್ಯಕ್ಷ ಮೂಕೊಂಡ ಬೋಸ್ ದೇವಯ್ಯ ಅವರು ಭಾನುವಾರ ಬೆಳಗ್ಗೆ ಆಕಸ್ಮಿಕವಾಗಿ ಸಾವಿಗೀಡಾಗಿದ್ದಾರೆ.
ಭಾನುವಾರ ಬೆಳಗ್ಗೆ ಮನೆಗೆ ಇಟ್ಟಿಗೆ ತಂದಿದ್ದ ಲಾರಿ ರಿವರ್ಸ್ ಹೋಗುವ ವೇಳೆ ಆಕಸ್ಮಿಕವಾಗಿ ಹಿಂಬದಿ ನಿಂತಿದ್ದ ಬೋಸ್ ಅವರಿಗೆ ಡಿಕ್ಕಿಯಾಗಿದ್ದು, ಈ ಸಂದರ್ಭ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸದಾ ಹಸನ್ಮುಖಿಯಾಗಿ, ಜನಸ್ನೇಹಿಯಾಗಿದ್ದ ಬೋಸ್ ದೇವಯ್ಯ ಅವರು, ಅಮ್ಮತ್ತಿ ಕೊಡವ ಸಮಾಜದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರಲ್ಲದೆ, ಗೋಣಿಕೊಪ್ಪ ಎಪಿಎಂಸಿ ಅಧ್ಯಕ್ಷರಾಗಿ, ಅಖಿಲ ಕೊಡವ ಸಮಾಜದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.