ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಕಾಪು ಸಿದ್ದಲಿಂಗಸ್ವಾಮಿ ಕಳೆದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹಲವು ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
2013ರಲ್ಲಿ ವರುಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಜೆಪಿ ಅಭ್ಯರ್ಥಿಯಾಗಿ ಕಾಪು ಸಿದ್ದಲಿಂಗಸ್ವಾಮಿ ಸ್ಪರ್ಧಿಸಿದ್ದರು. ಆದರೆ ಅವರು ಸಿದ್ದರಾಮಯ್ಯ ವಿರುದ್ಧ ಸಾವಿರಾರು ಮತಗಳ ಅಂತರದಿಂದ ಸೋತರು. ಯಡಿಯೂರಪ್ಪ ಸಿಎಂ ಆಗಿದ್ದಾಗ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು.