SHOCKING | ಭೀಕರ ರಸ್ತೆ ಅಪಘಾತದಲ್ಲಿ ಬಿಜೆಪಿ ನಾಯಕಿ ಸಾವು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣದ ಬೀಚುಪಲ್ಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಜೆಪಿ ನಾಯಕಿ ನೀರಜಾ ರೆಡ್ಡಿ ಮೃತಪಟ್ಟಿದ್ದಾರೆ.

ಕರ್ನೂಲ್‌ನ ಆಲೂರು ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿಯಾಗಿದ್ದ ನೀರಜಾ ರೆಡ್ಡಿ ಅವರು ಹೈದರಾಬಾದ್‌ನಿಂದ ಕರ್ನೂಲ್‌ಗೆ ಹಿಂದಿರುಗುತ್ತಿದ್ದಾಗ, ನೀರಜಾ ಕಾರ್‌ನ ಟೈರ್ ಸ್ಫೋಟಗೊಂಡಿದೆ.

కర్నూలు : రోడ్డు ప్రమాదంలో ఆలూరు మాజీ ఎమ్మెల్యే నీరజా రెడ్డి దుర్మరణంನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಪೊಲೀಸರು ಆಗಮಿಸಿದ್ದಾರೆ. ನೀರಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೀರಜಾ ಮೃತಪಟ್ಟಿದ್ದಾರೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!