ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ ಜಗದೀಶ್ ಶೆಟ್ಟರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜೀನಾಮೆ ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಜಗದೀಶ್ ಶೆಟ್ಟರ್ ಬೆಂಬಲಿಗರ ಅಭಿಪ್ರಾಯ ಪಡೆದು ಮುಂದಿನ ನಡೆ ಬಗ್ಗೆ ಚರ್ಚಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!