Monday, July 4, 2022

Latest Posts

ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಮುಖಂಡನ ಹತ್ಯೆ: ಅಪರಿಚಿತ ವ್ಯಕ್ತಿಗಳಿಂದ ಗುಂಡಿನ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸ್ಥಳೀಯ ಬಿಜೆಪಿ ಮುಖಂಡನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ದೆಹಲಿಯ ಮಯೂರ್ ವಿಹಾರ್‌ ಜಿಲ್ಲೆಯ ಯುವ ಬಿಜೆಪಿ ನಾಯಕ ಜೀತು ಚೌಧರಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಲಾಗಿದ್ದು, ಸ್ಥಲದಲಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಬುಧವಾರ ರಾತ್ರಿ 8 ಗಂಟೆಗೆ ಅವರ ಮನೆಯ ಹೊರಗೆ ಆರು ಸುತ್ತಿನ ಗುಂಡಿನ ದಾಳಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಬೈಕ್‌ನಲ್ಲಿ ಬಂದು ಗಾಜಿಪುರದ ಅವರ ನಿವಾಸದ ಬಳಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕೊಲೆ ನಡೆದ ಸ್ಥಳದಲ್ಲಿ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಹಲವು ಪ್ರಮುಖ ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹತ್ಯೆಯಾದ ಕೆಲವೇ ಕ್ಷಣಗಳಲ್ಲಿ ಬಿಜೆಪಿ ನಾಯಕ ನವೀನ್ ಕುಮಾರ್ ಜಿಂದಾಲ್ ಟ್ವಿಟರ್‌ ಮೂಲಕ ಜೀತು ಚೌಧರಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಬಿಜೆಪಿ ಮುಖಂಡನನ್ನು ಇಬ್ಬರು ದುಷ್ಕರ್ಮಿಗಳು ಮನಬಂದಂತೆ ಗುಂಡಿಕ್ಕಿ ಕೊಂದಿದ್ದಾರೆ. ಆದಷ್ಟು ಬೇಗ ಹಂತಕರನ್ನು ಬಂಧಿಸುವಂತೆ ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss