ಹೊಸದಿಗಂತ ಡಿಜಿಟಲ್ ಡೆಸ್ಕ್:
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಇಂದು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.
ಶಿವರಾಜ್ ಕುಮಾರ್ ಮತ್ತು ರಾಜ್ ಕುಮಾರ್ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದರಿಂದ ನಮಗೆ ನೋವಾಗಿದ್ದು, ಅಭಿಮಾನಿಗಳು ಅವರ ವಿರುದ್ಧ ಮಾತನಾಡಿ ಕ್ಷಮೆ ಕೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತ ಮನೆಯ ಗೇಟ್ ಪ್ರವೇಶಿಸಿ ಕುಮಾರ್ ಬಂಗಾರಪ್ಪ ವಿರುದ್ಧ ಧಿಕ್ಕಾರ ಕೂಗಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಶಿವಣ್ಣ ಅಭಿಮಾನಿಗಳ ನಡುವೆ ವಾಗ್ವಾದ ನಡೆದಿದೆ.
ಬಳಿಕ ಕುಮಾರ್ ಬಂಗಾರಪ್ಪ ಅವರ ನಿವಾಸಕ್ಕೆ ಕೆಎಸ್ ಆರ್ ಪಿ ತಂಡ ಆಗಮಿಸಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕುಮಾರ ಬಂಗಾರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.