ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಹಾಪುರ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರ ಸಹೋದರ ರಾಜು ರಾಥೋಡ್ ಅವರನ್ನು ಬಂಧಿಸಲಾಗಿದೆ. ಶಹಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರು ರಾಜಾ ರಾಠೋಡ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುಮಟ್ಕಲ್ ನಲ್ಲಿ ತಡರಾತ್ರಿ ಪೊಲೀಸರು ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಮಣಿಕಂಠ ರಾಠೋಡ್ ಅವರ ಸಹೋದರ ರಾಜು ರಾಠೋಡ್ ಅವರಿಗೆ ಸೇರಿದ ಗೋದಾಮಿನಲ್ಲಿ ಅಕ್ಕಿ ಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜು ಒಡೆತನದ ಶ್ರೀ ಲಕ್ಷ್ಮೀ ತಿಮ್ಮಪ್ಪ ಅವರ ಗೋದಾಮಿನಲ್ಲಿ 550 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.