ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ಶೆಹನವಾಜ್ ಹುಸೈನ್ ಹೃದಯಾಘಾತದಿಂದ ಆಸ್ಪತ್ರೆ ದಾಖಲಿಸಲಾಗಿದೆ.
ಹೃದಯಾಘಾತದಿಂದ ಅಸ್ವಸ್ಥಗೊಂಡ ಅವರನ್ನು ತಕ್ಷಣವೇ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶೆಹನವಾಜ್ ಪರಿಸ್ಥಿತಿ ಗಮನಿಸಿದ ವೈದ್ಯರ ತಂಡ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಶೆಹನವಾಜ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಸದ್ಯ ಚೇತರಿಸಿಕೊಳ್ಳುತ್ತಿರುವ ಶೆಹನವಾಜ್ ಅವರನ್ನು ನಾಳೆ ವಾರ್ಡ್‌ಗೆ ಸ್ಥಳಾಂತರ ಮಾಡಲಾಗುವುದು. ಶೆಹನವಾಜ್ ಆರೋಗ್ಯದ ಕುರಿತು ಸೂಕ್ಷ್ಮವಾಗಿ ನಿಗಾ ವಹಿಸಲಾಗುತ್ತದೆ. ಸದ್ಯ ಆರೋಗ್ಯ ಸ್ಥಿರವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಲೀಲಾವತಿ ಆಸ್ಪತ್ರೆ ಮಾಹಿತಿ ನೀಡಿದೆ.
ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿರುವ ಶೆಹನವಾಜ್, ಬಿಜೆಪಿ ವಕ್ತಾರ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.